ಬೆಂಗಳೂರು:- ಗುತ್ತಿಗೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, BBMP ವ್ಯಾಪ್ತಿಯ ಕಾಮಗಾರಿಗಳ ಹಣ ಬಿಡುಗಡೆಗೆ ಬಿಬಿಎಂಪಿ ಆದೇಶ ಹೊರಡಿಸಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತರು ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಕಾಮಗಾರಿಗಳ ಹಣ ಬಿಡುಗಡೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.
ಬೆಂಗಳೂರಿನಲ್ಲಿ ಎಡೆಬಿಡದೆ ಮಳೆ: ಸಿಟಿ ಮಂದಿ ಹೈರಾಣು, ವ್ಯಾಪಾರ ವಹಿವಾಟು ಭಾರಿ ಕುಸಿತ!
2025-26ನೇ ಸಾಲಿನ 1ನೇ ಕಂತಿನ ಮೊತ್ತ 750 ಕೋಟಿ ರೂ. ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರ ಕೋರಿಕೆಯ ಡಿಸಿಎಂ ಗುತ್ತಿಗೆದಾರರಿಗೆ ಬಿಡುಗಡೆಗೊಳಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆ ಹಣ ಬಿಡುಗಡೆಗೆ ಆದೇಶಿಸಲಾಗಿದೆ. ಈ ಬಗ್ಗೆ ಮುಖ್ಯ ಆಯುಕ್ತರು ಮಾಹಿತಿ ಕೊಟ್ಟಿದ್ದಾರೆ.