ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಾಲಯಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಅದರಲ್ಲೂ ಆಷಾಢ ಶುಕ್ರವಾರ ಹಾಗೂ ಆಷಾಢ ತಿಂಗಳಿನಲ್ಲಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಲಕ್ಷ ಲಕ್ಷ ದಾಟುತ್ತಾದೆ. ಆದರೆ ಈ ಬಾರಿ ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಗುಡ್ ನ್ಯೂಸ್ ಇದ್ದು, ಅದು ಏನು ಅಂತ ನೋಡೋಣ ಬನ್ನಿ.
ದೋಷಪೂರಿತ ಆದೇಶ: ಕೆಎಎಸ್ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!
ಆಷಾಢ ಮಾಸದ ಶುಕ್ರವಾರಗಳಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಾರೆ. ಆಷಾಢ ಮಾಸದ ಮೊದಲ ಶುಕ್ರವಾರ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ಸಮಸ್ಯೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಕೆಲವು ಸುಧಾರಿತ ಕ್ರಮಕ್ಕೆ ಮುಂದಾಗಿದೆ.
ಮುಂದಿನ ಆಷಾಢ ಶುಕ್ರವಾರಗಳಂದು ಮೆಟ್ಟಿಲು ಹತ್ತಿ ಬರುವ ಭಕ್ತರನ್ನು ಧರ್ಮ ದರ್ಶನದ ಸರತಿ ಸಾಲಿನಲ್ಲೇ ದರ್ಶನಕ್ಕೆ ಕಳುಹಿಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮೊದಲ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ನಿರೀಕ್ಷೆಗೂ ಮೀರಿ ಹೆಚ್ಚು ಭಕ್ತರು ಬಂದಿದ್ದರು. ಇದರಿಂದಾಗಿ ಜನಸಂದಣಿಯಿಂದಾಗಿ ಮೆಟ್ಟಿಲು ಹತ್ತಿ ಬಂದ ಭಕ್ತರು ದೇವಿಯ ದರ್ಶನ ಪಡೆಯಲು ವಿಳಂಬವಾಯಿತು. ಧರ್ಮ ದರ್ಶನ ಅಥವಾ ಟಿಕೆಟ್ ಪಡೆದವರಿಗೆ ತ್ವರಿತಗತಿಯಲ್ಲಿ ದೇವಿಯ ದರ್ಶನವಾಯಿತು.
ಹೀಗಾಗಿ, ಧರ್ಮ ದರ್ಶನದ ಸರತಿ ಸಾಲಿನಲ್ಲೇ ಮೆಟ್ಟಿಲು ಹತ್ತಿ ಬರುವ ಭಕ್ತರನ್ನು ಕೂಡ ಕಳುಹಿಸಲು ನಿರ್ಧರಿಸಲಾಗಿದೆ. ಉಳಿದಂತೆ ಸುಗಮ ದರ್ಶನಕ್ಕಾಗಿ ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಭಕ್ತಾಧಿಗಳು ಉಚಿತ ಬಸ್ ಸೇವೆ ಪಡೆದು ಕಡಿಮೆ ಸಮಯದಲ್ಲಿ ಸುಗಮವಾಗಿ ದೇವರ ದರ್ಶನ ಪಡೆದುಕೊಳ್ಳಬಹುದು. ಆದುದರಿಂದ ಭಕ್ತಾಧಿಗಳು ಉಚಿತ ಬಸ್ ಸೇವೆಯ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದೆ.