ಮಂಡ್ಯ:- ಹಳೇ ಮೈಸೂರು ಜೀವನಾಡಿಯಾಗಿರುವ ಕೆಆರ್‌ಎಸ್ ಡ್ಯಾಮ್ ತುಂಬುವ ಹಂತಕ್ಕೆ ಬಂದಿದೆ. ಇನ್ನೇನು ನಾಲ್ಕು ಅಡಿ ನೀರು ಬಂದರೆ ಡ್ಯಾಂ ಸಂಪೂರ್ಣ ಭರ್ತಿ ಆಗಲಿದೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಕೆಆರ್‌ಎಸ್ ಡ್ಯಾಂಗೆ ಭಾರೀ ಪ್ರಮಾಣದ ನೀರು ಹರಿದು ಬಂದಿದೆ. ಕೆಆರ್‌ಎಸ್ ಅಣೆಕಟ್ಟು ಭರ್ತಿಗೆ ಇನ್ನೂ 4ಅಡಿಯಷ್ಟೇ ಬಾಕಿ ಉಳಿದಿದೆ. ಈ ಮೂಲಕ 45 ವರ್ಷಗಳ ಬಳಿಕ ದಾಖಲೆ ಬರೆಯಲು KRS ಡ್ಯಾಂ ಸಜ್ಜಾಗಿದೆ.
45 ವರ್ಷಗಳ ಬಳಿಕ ಜೂನ್ ತಿಂಗಳಿನಲ್ಲಿ ಜಲಾಶಯ ಭರ್ತಿಯಾಗಿದೆ. ಡ್ಯಾಂಗೆ33,314 ಕ್ಯೂಸೆಕ್ ಒಳಹರಿವು ಹರಿದು ಬರುತ್ತಿದೆ. 120 ಅಡಿಗೆ ಕೆಆರ್‌ಎಸ್ ನೀರಿನ ಮಟ್ಟ ಏರಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 120.90ಅಡಿ ನೀರು ಭರ್ತಿಯಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 44.194 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂಗೆ 33.314 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,
ಡ್ಯಾಂನಿಂದ 33.076 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.
ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 120.90 ಅಡಿ.
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ.
ಇಂದಿನ ಸಾಮರ್ಥ್ಯ – 44.194. ಟಿಎಂಸಿ
ಒಳ ಹರಿವು – 33,314 ಕ್ಯೂಸೆಕ್
ಹೊರ ಹರಿವು – 33076 ಕ್ಯೂಸೆಕ್