ಬೆಂಗಳೂರು:- ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಜಾಗತಿಕವಾಗಿ ವಿಜೃಂಭಿಸುವುದೇ ಮಹಿಳಾ ಪರಿಷತ್ತಿನ ಮುಖ್ಯ ಗುರಿ: ಗಂಗಾಧರ ದೊಡ್ಡವಾಡ!
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಿದೆ. ಕೆಲವರು ಇದೇ ಹಣದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದರೆ, ಇನ್ನೂ ಕೆಲವರು ಸಮಾಜಕ್ಕೂ ಅನುಕೂಲ ಮಾಡಿ ಮಾದರಿಯಾಗಿದ್ದಾರೆ. ಆದರೆ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಎರಡು ತಿಂಗಳ ಹಣ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಾಕಿ ಇರುವ ಏಪ್ರಿಲ್ ತಿಂಗಳ ಗೃಹ ಲಕ್ಷ್ಮೀ ಹಣ ಒಂದು ವಾರದಲ್ಲಿ ಜಮೆಯಾಗುತ್ತದೆ ಎಂದು ಹೇಳಿಕೆ ಕೊಟ್ಟಿದ್ದಾರೆ.