ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ಜಮಾ ಆಗುತ್ತಿತ್ತು. ಒಂದೆರೆಡು ದಿನಗಳಲ್ಲಿ 2000 ಹಣ ಮನೆಯ ಯಜಮಾನಿ ಖಾತೆಗೆ ಜಮಾ ಆಗುತ್ತಿತ್ತು. ಆದರೆ ಕಳೆದ ಮೂರು ತಿಂಗಳ ಹಣ ಸರಿಯಾಗಿ ಬರುತ್ತಿರಲಿಲ್ಲ,
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆ ರೋಪಕ್ಕೆ ಬಳ್ಳಾರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಮೇ ತಿಂಗಳಲ್ಲಿ ಮೂರು ಕಂತಿನ ಹಣ ಬಿಡುಗಡೆಗೆ ಮಾಡೋದಾಗಿ ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ. ಬಾಕಿ ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದೆ. ಹಾಗಾಗಿ ಮೇ ತಿಂಗಳಲ್ಲಿ ಮೊದಲು ಮೂರು ವಾರಗಳಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
ಗೃಹಲಕ್ಷ್ಮಿ ಯೋಜನೆಯು 2023 ಆಗಸ್ಟ್ ತಿಂಗಳಲ್ಲಿ ಆರಂಭವಾಯಿತು. 2024 ಡಿಸೆಂಬರ್‌ವರೆಗೂ 17 ತಿಂಗಳ ಹಣ ಖಾತೆಗೆ ಜಮೆಯಾಗಿತ್ತು. ಜನವರಿ ತಿಂಗಳ ಹಣವನ್ನು ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು, ಇದೀಗ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣ ಬಿಡುಗಡೆ ಆಗಬೇಕಿದೆ.
ಇನ್ನೂ ಕರ್ನಾಟಕದಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೇರಲು ಸಾಧ್ಯವಾಗದ ಬಿಜೆಪಿ ನಾಯಕರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.