ಬೆಂಗಳೂರು: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಚಿನ್ನದ ಬೆಲೆ ಏರಿಕೆ ಯಾವಾಗ ನಿಲ್ಲುತ್ತದೆ ಅಥವಾ ಕಡಿಮೆಯಾಗುತ್ತದೆ ಎಂದು ಹೇಳುವುದು ಕಷ್ಟವಾಗಿದೆ. ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಚಿನ್ನವನ್ನು ವಿಶ್ವದ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗಿದೆ. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು. ನಿಧಾನವಾಗಿ ಕುಸಿತ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಕಾಣಲು ಆರಂಭಿಸಿತ್ತು.
ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ
ಆಭರಣ ಚಿನ್ನ ಗ್ರಾಮ್ಗೆ 85 ರೂಗಳಷ್ಟು ಕುಸಿತ ಕಂಡಿದೆ. ನಿನ್ನೆ ಮಂಗಳವಾರ 75 ರೂ ಇಳಿದಿತ್ತು. ಮೂರು ದಿನಗಳಿಂದ ಒಟ್ಟಾರೆ 165 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ವಿದೇಶಗಳಲ್ಲೂ ಇದರ ಬೆಲೆ ದೊಡ್ಡ ಮಟ್ಟದಲ್ಲಿ ಕುಸಿತವಾಗಿದೆ. ಬೆಳ್ಳಿ ಬೆಲೆ ಅಲ್ಪ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,800 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 25ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,220 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,210 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,220 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 90,700 ರೂ
- ಚೆನ್ನೈ: 90,700 ರೂ
- ಮುಂಬೈ: 90,700 ರೂ
- ದೆಹಲಿ: 90,850 ರೂ
- ಕೋಲ್ಕತಾ: 90,700 ರೂ
- ಕೇರಳ: 90,700 ರೂ
- ಅಹ್ಮದಾಬಾದ್: 90,750 ರೂ
- ಜೈಪುರ್: 90,850 ರೂ
- ಲಕ್ನೋ: 90,850 ರೂ
- ಭುವನೇಶ್ವರ್: 90,700 ರೂ