ಗದಗ:- ಯುವಕನ ಮೇಲೆ ಹಲ್ಲೆ ಮಾಡಿದ ಹಿನ್ನೆಲೆ ಗದಗದ ಉಪ ತಹಶೀಲ್ದಾರ್ ದೇವಾನಂದ ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಗೂಂಡಾ ವರ್ತನೆ ತೋರಿದ್ದ ಉಪ ತಹಶೀಲ್ದಾರ್ ದೇವಾನಂದ ವಾಲ್ಮೀಕಿಯವರನ್ನು ಗದಗ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದಲ್ಲಿ ಮಳೆ ಆರ್ಭಟ: ರಾಜಧಾನಿ ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್!
ಉಪ ತಹಶೀಲ್ದಾರ ದೇವಾನಂದ ವಾಲ್ಮೀಕಿ ಮತ್ತು ಅವರ ಸಹಚರ, ಕಾಂಗ್ರೆಸ್ ಮುಖಂಡ ವಿದ್ಯಾಧರ ದೊಡ್ಡಮನಿಯ ಗೂಂಡಾಗಿರಿ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಗದಗನ ಉಪ ತಹಶೀಲ್ದಾರ ದೇವಾನಂದ ವಾಲ್ಮೀಕಿ ಎಂಬುವರ ಸಂಬಂಧಿಕರ ಕಾರು ಶಿವು ಎಂಬುವರ ಬೈಕ್ಗೆ ಡಿಕ್ಕಿಯಾಗಿದೆ. ಆಗ ಶಿವು ಅವರ ಸ್ನೇಹಿತ ಅಕ್ಷಯ್ ನ್ಯಾಯ ಕೇಳಲು ತಹಶೀಲ್ದಾರ ಕಚೇರಿಗೆ ಹೋಗಿದ್ದಾರೆ. ಆಗ ಉಪ ತಹಶೀಲ್ದಾರ ದೇವಾನಂದ ಹಾಗೂ ಅವರ ಸಹಚರು ಅಕ್ಷಯ ಅವರಿಗೆ ಥಳಿಸಿದ್ದರು.ಗದಗನ ಉಪ ತಹಶೀಲ್ದಾರ ದೇವಾನಂದ ವಾಲ್ಮೀಕಿ ಎಂಬುವರ ಸಂಬಂಧಿಕರ ಕಾರು ಶಿವು ಎಂಬುವರ ಬೈಕ್ಗೆ ಡಿಕ್ಕಿಯಾಗಿದೆ. ಆಗ ಶಿವು ಅವರ ಸ್ನೇಹಿತ ಅಕ್ಷಯ್ ನ್ಯಾಯ ಕೇಳಲು ತಹಶೀಲ್ದಾರ ಕಚೇರಿಗೆ ಹೋಗಿದ್ದಾರೆ. ಆಗ ಉಪ ತಹಶೀಲ್ದಾರ ದೇವಾನಂದ ಹಾಗೂ ಅವರ ಸಹಚರು ಅಕ್ಷಯ ಅವರಿಗೆ ಥಳಿಸಿದ್ದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕೆ ಗದಗ ತಹಶೀಲ್ದಾರ ಕಚೇರಿಯಲ್ಲಿ ನಡೆದ ಘಟನೆ ತಾಜಾ ಉದಾಹರಣೆಯಾಗಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಸಿ ಪಾಟೀಲ್ ವಾಗ್ದಾಳಿ ಮಾಡಿದ್ದರು. ಈ ಘಟನೆ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ಅನ್ನೋ ಪ್ರಶ್ನೆ ಕಾಡುತ್ತಿದೆ. ಈ ರೀತಿ ಹಲವಾರು ಘಟನೆ ನಡೆದರೂ ಯಾರ ಮೇಲೂ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು. ಇದೀಗ ಕ್ರಮ ಕೈಗೊಳ್ಳಲಾಗಿದೆ