ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಅಣೆಕಟ್ಟುಗಳು ಮತ್ತು ಜಲಾಶಯಗಳಿಗೆ ಬಿಗಿ ಭದ್ರತೆ ಒದಗಿಸಲು ತುರ್ತು ಆದೇಶ ಹೊರಡಿಸಿದೆ. ರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರಸ್ತುತ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಜಲ ಸಂಪನ್ಮೂಲಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ, ಎಲ್ಲಾ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ತಕ್ಷಣ ನೇಮಿಸಲು ಆದೇಶಿಸಲಾಗಿದೆ. ರಾಜ್ಯದ ಜಲಾಶಯಗಳು, ವಿಶೇಷವಾಗಿ ಕಾವೇರಿ, ಕೃಷ್ಣ, ತುಂಗಭದ್ರಾ ಸೇರಿದಂತೆ ಪ್ರಮುಖ ಅಣೆಕಟ್ಟುಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಯೋಜನಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸರ್ಕಾರದ ಆದೇಶದ ಪ್ರಮುಖ ಅಂಶಗಳು:
ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ತಕ್ಷಣವೇ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವುದು.
ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಲ್ಲಿ 24/7 ಗಸ್ತು ಮತ್ತು ಕಣ್ಗಾವಲು ವ್ಯವಸ್ಥೆ.
ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯ ಅಣೆಕಟ್ಟುಗಳ ಸುರಕ್ಷತೆಗೆ ಸಂಬಂಧಪಟ್ಟ ಅಧಿಕಾರಿಗಳು ನೇರ ಹೊಣೆಗಾರರಾಗಿರುತ್ತಾರೆ.
ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ.