ನವದೆಹಲಿ: ಮೇ 1 ರಿಂದ ಫಾಸ್ಟ್ಟ್ಯಾಗ್ಗಳನ್ನು ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆಯಿಂದ ಬದಲಾಯಿಸಲಾಗುತ್ತಿದೆ ಎಂಬ ವದಂತಿಗಳ ನಡುವೆ, ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಪತ್ರಿಕಾ ಟಿಪ್ಪಣಿಯನ್ನು ಬಿಡುಗಡೆ ಮಾಡಿದೆ, ಇದರಲ್ಲಿ 2025 ರ ಮೇ 1 ರಿಂದ ರಾಷ್ಟ್ರವ್ಯಾಪಿ ಉಪಗ್ರಹ ಆಧಾರಿತ ಟೋಲಿಂಗ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.
ಹೌದು ಮೇ 1ರಿಂದ ಜಿಪಿಎಸ್ ಆಧಾರಿತ ಫಾಸ್ಟ್ಯಾಗ್ ಟೋಲ್ ಇರಲಿದೆ ಎಂಬ ಸುದ್ದಿಯು ಹರಿದಾಡಿತ್ತು. ಈ ವರದಿಯನ್ನು ತಳ್ಳಿ ಹಾಕಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ಈ ರೀತಿಯ ಯಾವುದೇ ಚಿಂತನೆ ಇಲ್ಲ. ಸದ್ಯ ಫಾಸ್ಟ್ಯಾಗ್ ಟೋಲ್ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದೆ.
Saffron Milk: ಬಿಸಿ ಬಿಸಿ ಹಾಲಿಗೆ ನೀವು ಕೇಸರಿ ಬೆರೆಸಿ ಕುಡಿದ್ರೆ ಏನಾಗುತ್ತೆ ಗೊತ್ತಾ..?
ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಬಗ್ಗೆ ಸಲಹೆಗಳು ಬಂದಿವೆ. ಆದರೆ ಅದನ್ನು ಜಾರಿಗೆ ತರುತ್ತಿಲ್ಲ. ಕೆಲವು ಕಡೆ ಪ್ರಯೋಗಿಕವಾಗಿ ಎನ್ಪಿಆರ್ ಫಾಸ್ಟ್ಯಾಗ್ (NPR FASTag) ಆಳವಡಿಕೆಗೆ ಚಿಂತನೆ ಮಾಡಲಾಗುತ್ತಿದೆ. ನಂಬರ್ ಪ್ಲೇಟ್ ಆಧಾರಿತ ಫಾಸ್ಟ್ಯಾಗ್ ಇದಾಗಿದ್ದು, ಇದರ ಸಾಧಕ ಭಾದಕಗಳನ್ನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎನ್ನುವ ಮೂಲಕ ವರದಿಯನ್ನು ತಳ್ಳಿಹಾಕಿದೆ.