ಬೆಂಗಳೂರು: ರೈತರಿಗೆ ನೀಡುವ ಪರಿಹಾರ ಮೊತ್ತಕ್ಕೆ ಸರಕು ಮತ್ತು ಸೇವಾ ತೆರಿಗೆ-ಜಿಎಸ್‌ಟಿ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೌದು ಭೂಮಿ ಕಳೆದುಕೊಂಡ ರೈತರಿಗೆ ಪರ್ಯಾಯವಾಗಿ ನಷ್ಟ ತುಂಬಿಕೊಡಲು ನೀಡುವ ಪರಿಹಾರಕ್ಕೆ ಜಿಎಸ್‌ಟಿ ಅಡಿ ತೆರಿಗೆ ವಿಧಿಸುವ ಅಗತ್ಯವಿಲ್ಲ ಎಂದು ಹೇಳಿರುವುದು ರೈತರಿಗೆ ಸಂತಸ ತಂದಿದೆ.
ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಶೋಕಾಸ್ ನೋಟಿಸ್ಗಳನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿಗಳಾದ ಆರ್.ಆಶಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ
ಈ ಆದೇಶದಿಂದ ರೈತರು ತಾವು ಪಡೆಯುವ ಪರಿಹಾರಕ್ಕೆ ಜಿಎಸ್ಟಿ ತೆರಿಗೆ ಪಾವತಿಸುವ ಅಗತ್ಯ ವಿರುವುದಿಲ್ಲ. ಅಲ್ಲದೆ, ಇಷ್ಟವಿಲ್ಲದಿದ್ದರೂ ಭೂಮಿಯನ್ನು ಕಳೆದುಕೊಂಡಿರುವ ಮತ್ತು ಅದರ ಜತೆ ಭಾವನಾತ್ಮಕ ಸಂಬಂಧ ಹೊಂದಿರುವ ರೈತರು ಕಳೆದುಕೊಳ್ಳುವ ಭೂಮಿಗೆ ಪರ್ಯಾಯವಾಗಿ ನಷ್ಟ ತುಂಬಿಕೊಡಲು ಪರಿಹಾರ ಪಡೆಯುತ್ತಾರೆ. ಅದಕ್ಕೆ ಜಿಎಸ್ಟಿ ಅಡಿ ತೆರಿಗೆ ವಿಧಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಅರ್ಜಿದಾರರು ಮತ್ತು ಕೆಐಎಡಿಬಿಇ ನಡುವೆ ಆಗಿರುವ ಒಪ್ಪಂದದಲ್ಲಿ ಹಲವು ಷರತ್ತುಗಳು ಒಳಗೊಂಡಿರಬಹುದು. ಆದರೆ ಅದಕ್ಕೂ ಅರ್ಜಿದಾರರಿಗೆ ನೀಡುವ ಪರಿಹಾರ ಮೊತ್ತಕ್ಕೂ ಸಂಬಂಧವಿಲ್ಲ. ಅದನ್ನು ಸಿಜಿಎಸ್ಟಿ/ಕೆಜಿಎಸ್ಟಿ ಶೆಡ್ಯೂಲ್-2ರಡಿ ಎಂಟ್ರಿ 5(ಇ) ಅಡಿ ಸೇವೆ ಎಂದು ಪರಿಗಣಿಸಲಾಗದು ಎಂದು ತಿಳಿಸಿದೆ.
ಜೊತೆಗೆ, ಒಪ್ಪಂದದ ವಿಚಾರದಲ್ಲಿ ಜಿಎಸ್ಟಿ ಕಾಯಿದೆಯನ್ನು ಒಪ್ಪಿಕೊಳ್ಳಬೇಕೆಂದೇನೂ ಇಲ್ಲ. ಸರ್ಕಾರ ಅರ್ಜಿದಾರರಿಂದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಅದಕ್ಕೆ ಪರ್ಯಾಯವಾಗಿ ಪರಿಹಾರ ನೀಡುತ್ತಿದೆ. ಅದರಲ್ಲಿ ತೆರಿಗೆ ವಿಧಿಸುವ ಅಗತ್ಯವಿಲ್ಲ ತಿಳಿಸಿರುವ ನ್ಯಾಯಪೀಠ, ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಬೇಡಿಕೆ ನೋಟಿಸ್ಗಳನ್ನು ರದ್ದುಗೊಳಿಸಿ ಆದೇಶಿಸಿದೆ.