ಹುಬ್ಬಳ್ಳಿ: ನಗರದಲ್ಲಿಂದು ತಡರಾತ್ರಿಯಿಂದಲೇ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತ ಆಗಿದೆ.
ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಸಾವಿಗೆ ಕಾರಣವಾಯ್ತು ಹಿರಿಯ ಮಗಳ ಆ ದುಡುಕು ನಿರ್ಧಾರ!
ಮೂಡ ಕವಿದ ವಾತಾವರಣವಿದ್ದುಮನೆಯಿಂದ ಹೊರಬರಲು ಜನರು ಹಿಂದೇಟು ಹಾಕತಾ ಇದ್ದಾರೆ. ಇನ್ನು ನಗರದ ಬಹುತೇಕ ಕಡೆಗಳಲ್ಲಿ ಮಳೆಯಿಂದಾಗಿ ಮನೆ ಕುಸಿಯುವ ಭೀತಿಯಲ್ಲಿ ಜನತೆ ಇದ್ದಾರೆ
ಇನ್ನೂ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದೆ. ಇದರ ಬೆನ್ನಲ್ಲೇ ವಾಯುಭಾರ ಕುಸಿತವೂ ಉಂಟಾಗಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನೊಂದು ವಾರ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಐಎಂಡಿ ಹೇಳಿದೆ.