ಬೆಂಗಳೂರು: ಸರ್ಕಾರದ ವಿರುದ್ಧ ಮಾತಾಡಿದ್ರೆ ಸುಮ್ಮನೆ ಇರೋಕೆ ಸಾಧ್ಯವಿಲ್ಲ. ಅದಕ್ಕೆ ಕೇಸ್ ಹಾಕಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ.
ಸುಳ್ಳು ಮಾಹಿತಿ ಕೊಡ್ತಿದ್ದಾರೆ. ಸರ್ಕಾರದ ವಿರುದ್ಧ ತಪ್ಪು ಅಭಿಪ್ರಾಯ ಬರೋ ಹಾಗೇ ಮಾಡ್ತಿದ್ದಾರೆ. ಹೀಗಿರುವಾಗ ಸುಮ್ಮನೆ ಇರೋದಕ್ಕೆ ಸಾಧ್ಯನಾ? ಹೀಗಾಗಿ ಕೇಸ್ ಹಾಕಲಾಗಿದೆ. ಸರ್ಕಾರದ ವಿರುದ್ಧ ಮಾತಾಡಿದ್ರೆ ಸುಮ್ಮನೆ ಇರೋಕೆ ಸಾಧ್ಯವಿಲ್ಲ. ಅದಕ್ಕೆ ಕೇಸ್ ಹಾಕಲಾಗಿದೆ ಎಂದು ಹೇಳಿದ್ದಾರೆ.
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಬಿಜೆಪಿ ಸರ್ಕಾರ ಇದ್ದಾಗ 40% ಕಮಿಷನ್ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿತ್ತು. ಆಗ ನೀವು ಮಾಡಿದ್ದು ಸುಳ್ಳು ಆರೋಪ ಅಲ್ವಾ ಎಂಬ ಪ್ರಶ್ನೆ. ವಿಪಕ್ಷ ಇದ್ದಾಗ ನಾವು ಮಾಡಿದ ಆರೋಪಗಳಿಗೆ ಅವರು ಕೇಸ್ ಹಾಕಿಲ್ಲ ಅಂದರೆ ಅದರ ಬಗ್ಗೆ ನಮಗೆ ಗೊತ್ತಿಲ್ಲ. ಕೇಸ್ ಹಾಕೋದು ಬಿಡೋದು ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.