ಬೆಂಗಳೂರು: ಆಗಸ್ಟ್ 15 ರ ಮೇಲೆ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಬಾರದು ಅಂತಾ ಸೂಚನೆ ಕೊಟ್ಟಿದ್ದೀವಿ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ.
ತಿರುಪತಿಯಲ್ಲಿ ಸೆಪ್ಟೆಂಬರ್ ಅಂತ್ಯದ ವೇಳೆಗೆ 400 ರೂಂಗಳ ವಸತಿಗೃಹ ಪೂರ್ಣಗೊಳ್ಳುತ್ತದೆ. ನಮ್ಮ ಎಲ್ಲಾ ದೇವಸ್ಥಾನದ 3 ಸಾವಿರ ರೂಂಗಳಿವೆ ಅವುಗಳನ್ನು ಆನ್ ಲೈನ್ ಮೂಲಕ ಬುಕ್ಕಿಂಗ್ ಮಾಡಲು ಪರ್ಮೀಷನ್ ಕೊಟ್ಟಿದ್ದೀವಿ ಎಂದು ಹೇಳಿದರು.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದರು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಇನ್ನೂ ಬೇರೆ ಬೇರೆ ರಾಜ್ಯದಲ್ಲಿ ಇರೋ ಮುಜರಾಯಿ ಇಲಾಖೆ ವಸತಿ ಭವನಗಳಲ್ಲಿ 3 ಸ್ಟಾರ್ ಸೌಲಭ್ಯ ಗಳನ್ನು ನೀಡಲು ನಿರ್ಧಾರ. ತಿರುಪತಿ, ತುಳಿಜಾಪುರ, ಪಂಡರಾಪುರ, ಸೇರಿ ಹಲವು ಕಡೆ ಭವನಗಳನ್ನು ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ಎಂದು ಹೇಳಿದ್ದಾರೆ.