ಬೆಂಗಳೂರು: ಪ್ರಸಿದ್ಧ ಕನ್ನಡ ನಟ ಬ್ಯಾಂಕ್ ಜನಾರ್ಧನ್ ಅವರು 76 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇನ್ನೂ ಜನಪ್ರಿಯ ನಟನ ನಿಧನಕ್ಕೆ ಕನ್ನಡ ಚಿತ್ರರಂಗ, ರಾಜಕೀಯ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಹುಡುಗಿಯರೇ ನೀವು ಕೂಡ ಮೆಡಿಮಿಕ್ಸ್ ಸೋಪ್ ಬಳಸ್ತಿದ್ದೀರಾ? ಇದು ಖಂಡಿತ ನಿಮಗಲ್ಲ!
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ”ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅನೇಕ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿದ್ಧ ಬ್ಯಾಂಕ್ ಜನಾರ್ಧನ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ಧನ್ ಅವರು,
ಪ್ರತೀ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಆ ಪಾತ್ರದ ಮೂಲಕ ಎಲ್ಲರನ್ನೂ ಸಮ್ಮೋಹನಗೊಳಿಸುತ್ತಿದ್ದರು. ಅವರ ನಿಧನ ನಮ್ಮ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.