ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲಿ ಎಮರ್ಜೆನ್ಸಿ ಘೋಷಿಸಲಾಯಿತು. ದೆಹಲಿ ಸೇರಿದಂತೆ ಹಲವಾರು ಉತ್ತರ ರಾಜ್ಯಗಳಲ್ಲಿ ಬಲವಾದ ಗಾಳಿ ಮತ್ತು ಆಲಿಕಲ್ಲು ಮಳೆಯೊಂದಿಗೆ ಭಾರಿ ಮಳೆ ಹಾನಿಗೊಳಗಾಯಿತು. ಈ ಮಳೆಯಿಂದಾಗಿ, 200 ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ದೆಹಲಿಯಿಂದ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ 6E2142 ಆಕಾಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು.
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಎಟಿಸಿಗೆ ಪೈಲಟ್ ಎರ್ಮೆಜೆನ್ಸಿ ಘೋಷಿಸಿದರು. ಮಳೆ ಮತ್ತು ಆಲಿಕಲ್ಲು ರಭಸದಿಂದ ವಿಮಾನ ಅಲುಗಾಡಿತು. ವಿಮಾನ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಆಘಾತಗೊಂಡರು. ಭಯಭೀತಿರಾದ ಪ್ರಯಾಣಿಕರಿಂದ ಕಿರುಚಾಡಿದರು. 6E2142 ವಿಮಾನವು ಶ್ರೀನಗರ ಸಮೀಪಿಸುತ್ತಿದ್ದಾಗ ಆಲಿಕಲ್ಲು ಮಳೆಯಿಂದ ತೀವ್ರ ಹಾನಿಗೆ ಒಳಗಾಯಿತು. ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಡ್ಯಾಮೇಜ್ ಆಯಿತು.
ಆದರೆ ಸಿಬ್ಬಂದಿ ಸಂಜೆ 6:30 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ವಿಮಾನ ಇಳಿದ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ವಿಮಾನದಲ್ಲಿದ್ದ ಎಲ್ಲ 227 ಮಂದಿಯೂ ಸೇಫ್ ಆಗಿದ್ದಾರೆ. ಪೈಲಟ್‌ಗಳ ಚಾಕಚಕ್ಯತೆಯಿಂದ ಎಲ್ಲ ಪ್ರಯಾಣಿಕರು ಸೇಫ್ ಆಗಿ ಬದುಕುಳಿದಿದ್ದಾರೆ. ವಿಮಾನದ ಮುಂಭಾಗ (Nose damage) ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿದ್ದು, ಈ ಹಾನಿಯನ್ನು ನೋಡಿದವರು ಪ್ರಯಾಣಿಕರು ಪವಾಡಸದೃಶರಾಗಿ ಬದುಕುಳಿದಿದ್ದಾರೆ ಎನ್ನುವಷ್ಟು ಗಂಭೀರ ಪ್ರಮಾಣದಲ್ಲಿ ವಿಮಾನ ಹಾನಿಗೊಳಗಾಗಿದೆ.