ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ʻಕೈʼ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಂವಿಧಾನ್ ಬಚಾವೋ ಹೆಸರಿನಲ್ಲಿ ಹೋರಾಟ ಇದಾಗಿದೆ. ನಗರದ ಗಿರಣಿ ಚಾಳ ಮೈದಾನದಲ್ಲಿ ಕಾಂಗ್ರೆಸ್ ಧರಣಿ ಹಮ್ಮಿಕೊಳ್ಳಲಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಯಕರಾದ ಸುರ್ಜೇವಾಲಾ, ಸಿಎಂ ಸಿದ್ದ ರಾಮಯ್ಯ, ಡಿ ಸಿಎಂ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಹಾಗೂ ಎಐಸಿಸಿ,ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸುವರು.ಮಧ್ಯಾಹ್ನ ಮೂರು ಗಂಟೆಗೆ ನಡೆಯುವ ಪ್ರತಿಭಟನೆ ಕೇಂದ್ರ ಸರ್ಕಾರದ ಮೇಲೆ ಸಿಡಿದೆದ್ದಿರುವ ಕಾಂಗ್ರೆಸ್ ಇಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ.
ಸಂವಿಧಾನ್ ಬಚಾವೋ ಹೆಸರಿನಲ್ಲಿ ಪ್ರತಿಭನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು 30 ಸಾವಿರನ್ನೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರವಾರ ರಸ್ತೆಯಲ್ಲಿರುವ ಗಿರಣಿ ಚಾಳ ಮೈದಾನದಲ್ಲಿ ಮಧ್ಯಾಹ್ನ 3ಕ್ಕೆ ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ಸಮಾವೇಶ ನಡೆಸಲಿದೆ. ಸಂವಿಧಾನ ಆಶಯಗಳಿಗೆ ವಿರುದ್ಧದ ಧೋರಣೆಗಳನ್ನು ಜನರಿಗೆ ತಿಳಿಸಿ ಸಂವಿಧಾನ ರಕ್ಷಿಸಿ ಎಂಬ ಸಂದೇಶ ನೀಡಲು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಣದೀಪ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಸಚಿವರಾದ ಎಚ್.ಕೆ.ಪಾಟೀಲ, ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ, ಲಕ್ಷ್ಮೀ ಹೆಬ್ಬಾಳ್ಕರ್, ಸಂತೋಷ ಲಾಡ್, ಶಾಸಕರು, ಸಂಸದರು ಸೇರಿದಂತೆ ಪಕ್ಷದ ದೊಡ್ಡ ದಂಡೇ ಹುಬ್ಬಳ್ಳಿಗೆ ಬರಲಿದೆ ಧಾರವಾಡ, ಹುಬ್ಬಳ್ಳಿ-ಧಾರವಾಡ ಮಹಾನಗರ, ಹಾವೇರಿ, ಗದಗ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 25-30 ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದಿನ ಹುಬ್ಬಳ್ಳಿ ಪ್ರತಿಭಟನಾ ಸಮಾವೇಶದ ನಂತರ ತಾಲೂಕು ಮಟ್ಟದಲ್ಲೂ ಹೋರಾಟ ನಡೆಸಲು ಈಗಾಗಲೇ ಕಾಂಗ್ರೆಸ್ ಯೋಜನೆ ರೂಪಿಸಿದ್ದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗಳ ವಿರುದ್ಧ ಪ್ರತಿಭಟಿಸಲಿದೆ. ಇನ್ನು ಮೊನ್ನೆ ಬೆಳಗಾವಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ನಡೆದ ನಂತರ ಇಂದಿನ ಸಮಾವೇಶಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ವೇದಿಕೆಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.