Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Hardik Pandya: GT ವಿರುದ್ಧದ ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ..!

    By Author AINMarch 30, 2025
    Share
    Facebook Twitter LinkedIn Pinterest Email
    Demo

    ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ ಆಡಿದ 2 ಪಂದ್ಯಗಳಲ್ಲೂ ಸೋತಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಗ್ಗರಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ.

    ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 196 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 160 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 36 ರನ್​ಗಳಿಂದ ಸೋಲೊಪ್ಪಿಕೊಂಡಿತು.

    ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ.

    Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!

    ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಪಂದ್ಯದ ವೇಳೆ ಬೌಂಡರಿ ಲೈನ್​ನಿಂದ ಒರ್ವ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

    ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ, ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.

    ಇದಕ್ಕೂ ಮುನ್ನ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿದ ಕಾರಣ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು.

     

    Demo
    Share. Facebook Twitter LinkedIn Email WhatsApp

    Related Posts

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್’ನಲ್ಲಿ ಸೋಲು ಕಂಡ ಟೀಂ ಇಂಡಿಯಾ..!

    June 25, 2025

    ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.