ಬೆಂಗಳೂರು: ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು.
Vastu Tips For Broom: ಮನೆಯ ಈ ದಿಕ್ಕಲ್ಲಿ ಪೊರಕೆ ಇಟ್ರೆ ಸಂಪತ್ತು..! ಹೀಗೆ ಮಾಡಿದ್ರೆ ಬಡತನ ಕಾಡುತ್ತೆ
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇವಲ ಹಾಸನ ಜಿಲ್ಲೆಗೆ ಮಾತ್ರ ಲಸಿಕೆ ನೀಡಿದ್ರಾ..? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ದೇಶದ ಕೋಟ್ಯಂತರ ಜನರಿಗೆ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ ಕೊರೊನಾ ಲಸಿಕೆ ರಫ್ತು ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಘಟನೆ ಸಂಬಂಧ ಎಚ್ಚೆತ್ತುಕೊಂಡು ಸಮರ್ಪಕ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದಾರೆ.