ವಿಜಯಪುರ: 22 ವರ್ಷದ ಯುವಕನೊಬ್ಬ ತಂದೆಯ ಪಿಸ್ತೂಲ್’ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ ಮಿರ್ಜಿ (22) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು,
ಯುವಕನ ತಂದೆ ಹಾಗೂ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್ ಅನ್ನು ತೆಗೆದುಕೊಂಡು ಬೆಡ್ ರೂಂಗೆ ಹೋಗಿ ತಲೆಗೆ ಹೊಡೆದುಕೊಂಡ ಯುವಕ ಸಾವನ್ನಪ್ಪಿದ್ದಾನೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಈ ಘಟನೆ ನಡೆದಿದ್ದು,
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್ ರೂಂ ಬಾಗಿಲು ತೆರೆದಿದ್ದಾರೆ. ತಕ್ಷಣ ಅಶನಂ ನನ್ನು ಬಿಎಲ್ಇಡಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರ ಮಾಡಿದ್ದಾರೆ. ಆದರೆ ಅಶನಂ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.