ಹಾಸನ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ. ಝೊಮ್ಯಾಟೋ ಫುಡ್ ಡೆಲಿವರಿ ಬಾಯ್ ಸಾವನ್ನಪ್ಪಿದ್ದಾನೆ. ಹಾಸನ ಹೊರವಲಯದ ಬೂವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ಈ ಅವಘಡ ನಡೆದಿದೆ. ಮುತ್ತತ್ತಿ ಗ್ರಾಮದ ಎಸ್.ಬಿ.ಎಂ. ಲೇಔಟ್ನ ನಿವಾಸಿ ಶರತ್(40) ಮೃತ ದುರ್ದೈವಿ.
ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಫುಡ್ ಡೆಲಿವರಿ ಮಾಡಲು ಗೆಂಡೆಗಟ್ಟೆಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಶರತ್ ತಲೆಗೆ ತೀವ್ರ ಪೆಟ್ಟು ಬಿದ್ದು, ಶರತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಾಸನದಲ್ಲಿ ಗಾಳಿಮಳೆ ; ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಕೆಎಸ್ಆರ್ಟಿಸಿ ನೌಕರ ಸಾವು
ಮತ್ತೊಬ್ಬ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು..