ಶಿಮ್ಲಾ:- ಅನಾರೋಗ್ಯ ಸಮಸ್ಯೆಯಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!
ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಸೋನಿಯಾ ಗಾಂಧಿ ಅವರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಉಂಟಾಗಿತ್ತು. “ಅವರು ಪ್ರಸ್ತುತ ಸ್ಥಿರವಾಗಿದ್ದಾರೆ ಮತ್ತು ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ” ಎಂದು ಹಿಮಾಚಲ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ. ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಿರಿಯ ವೈದ್ಯರು ಸೋನಿಯಾ ಗಾಂಧಿ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆತರಲಾಗಿದೆ. ಅವರ ಸಂಪೂರ್ಣ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿದೆ ಎಂದು ದೃಢಪಡಿಸಿದ್ದಾರೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರ ನರೇಶ್ ಚೌಹಾಣ್ ಅವರ ಪ್ರಕಾರ, ಹಿರಿಯ ಕಾಂಗ್ರೆಸ್ ನಾಯಕಿಯನ್ನು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದಾಗಿ ಕರೆತರಲಾಗಿದೆ. ಅವರು ಪ್ರಸ್ತುತ ಸ್ಥಿರರಾಗಿದ್ದಾರೆ ಎಂದು ಹೇಳಿದ್ದಾರೆ.