ಚಾಮರಾಜನಗರ;- ಖಾಸಗಿ ಬಸ್ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
ಅನುಮಾನಾಸ್ಪದವಾಗಿ ಮರಿ ಆನೆ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವೆಂದು ದೃಢ!
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಿಣ್ಯಂ ಗ್ರಾಮದ ಖಾಸಗಿ ಬಸ್ ಚಾಲಕ ರಮೇಶ್ (೪೭) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಘಟನೆ ವಿವರ: ಹನೂರು ಪಟ್ಟಣದಿಂದ ಕೊಳ್ಳೇಗಾಲಕ್ಕೆ ಖಾಸಗಿ ಬಸ್ (ಸಚಿನ್) ಚಾಲನೆ ಮಾಡಿಕೊಂಡು ತೆರಳುತ್ತಿದ್ದಾಗ ಮಧುವನಹಳ್ಳಿ ಗ್ರಾಮದ ಬಳಿ ಎದೆ ನೋವು ಕಾಣಿಸಿಕೊಂಡಿದೆ. ಚಾಲಕ ರಮೇಶ್ ತಕ್ಷಣ ಬಸ್ ನಿಲ್ಲಿಸಿ ಆಟೋದ ಮೂಲಕ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿದ್ದ ಸಿಬ್ಬಂದಿಗಳು ಊಟದ ವ್ಯತ್ಯಾಸದಿಂದ ಎದೆ ಉರಿ ಕಾಣಿಸಿಕೊಂಡಿರಬಹುದು ಎಂದು ತಿಳಿಸಿದ್ದಾರೆ. ನಂತರ ಚಾಲಕ ರಮೇಶ್ ಖಾಸಗಿ ಬಸ್ ನಿಲ್ದಾಣದಲ್ಲಿ ತೆರಳಿ ಕೋಲ್ಡ್ ಜ್ಯೂಸ್ ಕುಡಿಯುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಜನನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರ ವೇಳೆಗೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.