ಚಿಕ್ಕಮಗಳೂರು:- ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಹೀಗಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ನಾಳೆ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದ್ದು, ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಕಡಲತೀರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.