ಬೆಂಗಳೂರು:- ಧಾರಕಾರ ಮಳೆ ಹಿನ್ನೆಲೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: DCM ಡಿಕೆಶಿ ಭೇಟಿ ಮಾಡಿ ಚರ್ಚಿಸಿದ ಬಿ ಆರ್ ಪಾಟೀಲ್!
ಮುಂಜಾಗ್ರತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ನಾಳೆ ಅಂದರೆ ಗುರುವಾರ ರಜೆ ಘೋಷಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಕೇವಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದ್ದರೆ, ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದ, ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಸಹ ಜಿಲ್ಲೆಯ ಮೂರು ತಾಲುಕಿನ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನಲ್ಲಿ ಮಾತ್ರ ಜೂನ್ 26ರಂದು ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಹಾಸನದಲ್ಲೂ ಕೂಡ ವರುಣ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ 3 ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ , ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಲತಾ ಕುಮಾರಿ ಆದೇಶಿಸಿದ್ದಾರೆ.
ಇನ್ನು ಕೊಡು ಜಿಲ್ಲೆಯಲ್ಲೂ ಸಹ ನಾಳೆಯೂ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕೊಡಗು ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 26ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ