ಭಾರೀ ಮಳೆ: ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು!

ವಿಜಯಪುರ:- ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಜರುಗಿದೆ. ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ ಪ್ಲ್ಯಾನ್​ ಇದೆ: ಆರ್ ಅಶೋಕ್! ಸಂಗೀತಾ ಬಾಳಾಸಾಹೇಬ ಪಾಟೀಲ (30) ಮೃತ ದುರ್ದೈವಿ. ಕಳೆದ ತಡರಾತ್ರಿ ಮನೆಯಲ್ಲಿ ಮಲಗಿದ್ದಾಗ ಅವಘಡ ಸಂಭವಿಸಿದೆ. ಮಳೆಯಿಂದಾಗಿ ಮನೆ ಸೋರುತ್ತಿದ್ದ ವೇಳೆ ಮನೆಯಿಂದ ಎದ್ದು ಹೊರ ಬಂದಿದ್ದರಿಂದ ಪತಿ ಹಾಗೂ ಮಕ್ಕಳು ಪಾರಾಗಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.