ಬೆಂಗಳೂರು:- ಇಂದು ನಗರಾದ್ಯಂತ ಸುರಿಯುತ್ತಿರುವ ಗುಡುಗು ಸಹಿತ ಮಳೆ, ಮುಂದಿನ 03 ದಿನ ಹೀಗೆ ಸುರಿಯಲಿದೆ. ತಂಪು ವಾತಾವರಣ ಕಂಡು ಬರಲಿದ್ದು, ತಾಪಮಾನದಲ್ಲಿ ಇಳಿಕೆ ಆಗಲಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ ; ಎಂಟು ಮಂದಿ ಪೊಲೀಸ್ ವಶಕ್ಕೆ
ಶುಕ್ರವಾರ ಸಂಜೆ ಆಗುತ್ತಿದ್ದಂತೆ ಕೋರಮಂಗಲ, ಡೈರಿ ವೃತ್ತ, ಲಾಲ್ ಬಾಗ್, ಯಲಹಂಕ, ಬೆಳ್ಳಂದೂರು, ಮೆಜೆಸ್ಟಿಕ್, ವಿದ್ಯಾರಣ್ಯಪುರ, ರಾಜಾಜಿನಗರ, ಜಯನಗರ, ಚಾಮರಾಪೇಟೆ, ಯಶವಂತಪುರ, ಎಲೆಕ್ಟ್ರಾನಿಕ್ ಸಿಟಿ, ಬೆಳ್ಳಂದೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆ ದಾಖಲಾಗಿದೆ. ಅದರಂತೆ ಇಂದು ಕೂಡ ಭಾರೀ ಮಳೆ ಆಗಲಿದೆ. ಹೀಗಾಗಿ ಇಂದು ಬೆಂಗಳೂರು vs ಚೆನ್ನೈ ಪಂದ್ಯಕ್ಕೂ ಮಳೆ ಎದುರಾಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದ್ದು, ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಆಗುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಕಳೆದ ತಿಂಗಳು ತವರಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಹ್ಯಾಟ್ರಿಕ್ ಮುಖಭಂಗ ಅನುಭವಿಸಿತ್ತು. ಆಗ ಕೂಡ ಬೆಂಗಳೂರಲ್ಲಿ ಮಳೆಯಾಗಿತ್ತು. ಪರಿಣಾಮ ಓವರ್‌ಗಳನ್ನು ಕಡಿತಗೊಳಿಸಿ ತಡವಾಗಿ ಪಂದ್ಯ ನಡೆಸಲಾಗಿತ್ತು. ಮಳೆ ಬಾದಿತ ಪಂದ್ಯದಲ್ಲಿ ಆರ್‌ಸಿಬಿ ಸೋತಿತ್ತು.
ಆಡಿರುವ 10 ಪಂದ್ಯಗಳ ಪೈಕಿ 7 ರಲ್ಲಿ ಗೆದ್ದಿರುವ ಆರ್‌ಸಿಬಿ ಪ್ಲೇ-ಆಫ್ ಸನಿಹದಲ್ಲಿದೆ. ಈ ಆವೃತ್ತಿಯಲ್ಲಿ ಬದ್ಧ ವೈರಿ ಜೊತೆಗಿನ 2ನೇ ಪಂದ್ಯದಲ್ಲೂ ಆರ್‌ಸಿಬಿ ಗೆದ್ದರೆ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಿದೆ. 5 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಚೆನ್ನೈ ಈಗಾಗಲೇ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದಿದೆ.
ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.