ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ ಕೂಡ ಮಳೆ ಆರ್ಭಟಿಸಿದ್ದು, ಇದೀಗ ಇಂದು ಮಧ್ಯಾಹ್ನದಿಂದಲೇ ಮಳೆ ಸುರಿಯುತ್ತಿದ್ದು, ಕೇಂದ್ರ ಭಾಗ ಸೇರಿದಂತೆ ನಗರದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮೇಖ್ರಿ ಸರ್ಕಲ್, ಸದಾಶಿವನಗರ, ಶಿವಾಜಿನಗರ,
ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!
ವಸಂತನಗರ, ಹೈಗ್ರೌಂಡ್ಸ್, ವಿಧಾನಸೌಧ, ಸೆಂಟ್ರಲ್ ಸಿಲ್ಕ್ ಬೋರ್ಡ್, ಚಾಮರಾಜಪೇಟೆ, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ರೋಡ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಮಹಾಲಕ್ಷ್ಮಿ ಲೇಔಟ್, ಶೇಷಾದ್ರಿಪುರಂ, ಚಿಕ್ಕಪೇಟೆ, ಅರಮನೆ ಮೈದಾನ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ.
ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿ, ಕೆಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಈ ಬೆನ್ನಲ್ಲೇ ಮತ್ತೆ ಮಳೆ ಶುರುವಾಗಿದೆ.