ಹುಬ್ಬಳ್ಳಿ:- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇಂದು bಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದ್ದರಿಂದ. ಹುಬ್ಬಳ್ಳಿ ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ, ಇಂದು ಮತ್ತೆ ಆರ್ಭಟಿಸಿದ್ದಾನೆ. ಇನ್ನೂ ಹುಬ್ಬಳ್ಳಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಗುಡುಗು ಸಿಡಿಲು ಮಿಂಚು ಮಿಶ್ರಿತ ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.