ಬೆಂಗಳೂರು:- ಕರ್ನಾಟಕದಲ್ಲಿ ಕಳೆದ 1 ವಾರಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾತ್ರಿ ಅಥವಾ ಸಂಜೆ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.