ಬೆಂಗಳೂರು:- ಸೈಕ್ಲೋನ್ ಎಫೆಕ್ಟ್ ಹಿನ್ನೆಲೆ, ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ KSRTC ಚಾಲಕ: ಡೆತ್ ನೋಟ್ ನಲ್ಲಿ ಬರೆದಿದ್ದೇನು?
ಕಳೆದ ಎರಡು ದಿನಗಳಿಂದ ರಾತ್ರಿ ಸಮಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಕಂಡುಬಂದಿದ್ದು, ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಕೊಡಗು, ಕೋಲಾರ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಯಚೂರು. ಕೊಪ್ಪಳ, ಕಲಬುರಗಿ, ಯಾದಗಿರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ