ದಕ್ಷಿಣ ಕನ್ನಡ:- ಭಾರೀ ಮಳೆ ಹಿನ್ನೆಲೆ ಕರ್ನಾಟಕದ ಹಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
IPL 2025: ಮುಂಬೈ ವಿರುದ್ಧ ಭರ್ಜರಿ ಗೆಲುವು: ಟೇಬಲ್ ಟಾಪರ್ ಆದ ಪಂಜಾಬ್ ಕಿಂಗ್ಸ್!
ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಇನ್ನೂ ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಧೋ ಎಂದು ಸುರಿಯುತ್ತಿದೆ. ಮಂಗಳೂರಿನ ಪಂಪ್ವೆಲ್ ಫ್ಲೈ ಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.