ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣಮಳೆ ಅಬ್ಬರಿಸಿ ಬೊಬ್ಬರಿದಿದೆ.
ಬಿರುಗಾಳಿ ಸಹಿತ ಮಳೆ, ಸಿಡಿಲು ಬಡಿದು, ಮರ ಉರುಳಿರುವುದು ಸೇರಿದಂತೆ ವರುಣನ ಅಬ್ಬರಕ್ಕೆ ರಾಜ್ಯದಲ್ಲಿ ಒಂದೇ ದಿನ 12 ಜನರು ಬಲಿಯಾಗಿದ್ದಾರೆ.
ಸಿಡಿಲಾಘಾತಕ್ಕೆ 7 ಬಲಿ
ರಾಜ್ಯದಲ್ಲಿ ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಬೀರಪ್ಪ (45) ಹಾಗೂ ಅವರ ಅಣ್ಣನ ಮಗ ಸುನೀಲ್ (26) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಬಸನಗೌಡ (40) ಹಾಗೂ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಯಂಕಪ್ಪ ಜಾಡಿ (45) ಸಿಡಿಲಿಗೆ ಬಲಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಲ್ಲಪ್ಪ ಗುರಶಾಂತಪ್ಪ ತಾಳಿಕೋಟಿ (47) ಸಾವನ್ನಪ್ಪಿದ್ದಾರೆ.
ಆಪರೇಷನ್ ಸಿಂಧೂರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ: ಟೆಕ್ಕಿ ಅರೆಸ್ಟ್!
ಹಾವೇರಿಯಲ್ಲೂ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಹೊಲದ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸುನೀಲ ಸುರೇಶಪ್ಪ ಕಾಳೇರ(19) ಮೃತಪಟ್ಟ ಘಟನೆ ರಟ್ಟೀಹಳ್ಳಿ ತಾಲೂಕಿನ ಕುಡಪಲಿ ಗ್ರಾಮದಲ್ಲಿ ನಡೆದಿದೆ.
4ದಿನ ಯಲ್ಲೋ ಅಲರ್ಟ್
ಬೆಂಗಳೂರು, ಮೈಸೂರು, ಕೊಪ್ಪಳ, ಶಿವಮೊಗ್ಗ, ಧಾರವಾಡ, ವಿಜಯಪುರ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಮುಂದಿನ 4 ದಿನ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.