ಬೆಂಗಳೂರು:- ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಕರ್ನಾಟಕದ ಧಾರವಾಡ, ಉಡುಪಿ, ಕೊಡುಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶಿಸಿದೆ.
ರಾಜಕೀಯ ದುರಾಸೆಯಿಂದ ನನ್ನನ್ನು ಜೈಲಿಗೆ ಹೋಗುವಂತೆ ಮಾಡಿದ್ರೂ: ಸಿದ್ದರಾಮಯ್ಯ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ!
ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಜಟರಾಜಾ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದು, ರೆಡ್ ಅಲರ್ಟ್ ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿನ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.