ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್: ಶಿಕ್ಷಣ ಸಚಿವರು ಹೇಳಿದ್ದೇನು?
ಅದರಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ನಲ್ಲಿ ನಾಳೆಯಿಂದ 2 ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.
ಈ ಅವಧಿಯಲ್ಲಿ 110 ಮಿ.ಮೀ. ನಿಂದ 200 ಮಿ.ಮೀ.ವರೆಗೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಜೂನ್ 11ರಂದು ಬಹುತೇಕ ಯೆಲ್ಲೋ ಅಲರ್ಟ್ ಇರಲಿದ್ದು ಜೂನ್ 12 ಹಾಗೂ 13 ಮಾತ್ರ ರೆಡ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.