ಮಂಗಳೂರು:- ಭಾರೀ ಮಳೆಯಿಂದ ಮನೆಗಳ ಮೇಲೆ ಗುಡ್ಡ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಮೋಂಟೆಪದವು ಬಳಿ ಜರುಗಿದೆ. ಫಾತಿಮಾ ನಯೀಮ ಸಾವನ್ನಪ್ಪಿರುವ ಬಾಲಕಿ. ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.
ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ರಕ್ಷಣೆ ಮಾಡಿದ್ದರು. ಸದ್ಯ ಮೋಂಟೆಪದವು ಬಳಿ ಮೂವರ ರಕ್ಷಣೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.