ಬೆಂಗಳೂರು:- ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಗದಗ,ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 26ರವರೆಗೆ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.
ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.