ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ.
ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.
Jitesh Sharma: ನನ್ನ ಸ್ಪೋಟಕ ಆಟಕ್ಕೆ ಆರ್ಸಿಬಿಯಲ್ಲಿರುವ ಅಣ್ಣ ಕಾರಣ: ಜಿತೇಶ್!
ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು , ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.