ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!
ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಡಿಕೇರಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿಗೆ ಜೀವ ಕಳೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಒಂದೇ ವಾರದಲ್ಲಿ 103 ಅಡಿಗೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.