ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಜೂ.19ರವರೆಗೆ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಮೋದಿ ನೇತೃತ್ವದ ಕೇಂದ್ರಕ್ಕೆ 11 ವರ್ಷ: ಮಡಿಕೇರಿಯಲ್ಲಿ ಗಿಡ ನೆಡುವ ಕಾರ್ಯಕ್ರಮ!
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೋದಿ ನೇತೃತ್ವದ ಕೇಂದ್ರಕ್ಕೆ 11 ವರ್ಷ: ಮಡಿಕೇರಿಯಲ್ಲಿ ಗಿಡ ನೆಡುವ ಕಾರ್ಯಕ್ರಮ!
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ