ಬೆಂಗಳೂರು:- ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ ಆಗಲಿದ್ದು, ಕರಾವಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗ್ಗೆ ಎದ್ದಾಕ್ಷಣ ಕಾಫಿ-ಟೀ ಕುಡಿಯೋ ಅಭ್ಯಾಸ ಇದ್ಯಾ!? ಹಾಗಿದ್ರೆ ಇಂದೇ ಬಿಟ್ಟು, ಈ ರಸ ಕುಡಿಯಿರಿ!
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.ಎಚ್ಎಎಲ್ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.