ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಜಾಫ್‌ಗಢ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಶುಕ್ರವಾರ ನಸುಕಿನ ಜಾವ ಈ ಅವಘಡ ಸಂಭವಿಸಿದೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು, ಈ ಅವಘಡ ಸಂಭವಿಸಿದೆ.
26 ವರ್ಷದ ಜ್ಯೋತಿ ಮತ್ತು ಆಕೆಯ ಮೂರು ಮಕ್ಕಳು ಮೃತಪಟ್ಟಿದ್ದಾರೆ. ಸದ್ಯ ಪೊಲೀಸರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದು, ನಾಲ್ವರನ್ನೂ ಅವಶೇಷಗಳಿಂದ ಹೊರತೆಗೆದಿದ್ದಾರೆ. ಇನ್ನೂ ಘಟನೆಯಲ್ಲಿ ಜ್ಯೋತಿ ಅವರ ಪತಿ ಅಜಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
https://ainkannada.com/rain-havoc-in-bengaluru-one-death-traffic-jams-in-many-places/
ಭಾರತ ಹವಾಮಾನ ಇಲಾಖೆ ನಗರದಲ್ಲಿ ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ನಗರದ ಹಲವಾರು ಭಾಗಗಳಲ್ಲಿ ನೀರು ನಿಂತಿರುವುದು ಮತ್ತು ಮರಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 1 ರಿಂದ ಮೇ 7 ರವರೆಗೆ ಬಿರುಗಾಳಿ ಮತ್ತು ಮಳೆಯಾಗುವ ನಿರೀಕ್ಷೆಯಿದೆ.