ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಸಿಲಿಕಾನ್ ಸಿಟಿಗೆ ಹೆಮ್ಮಾರಿ ಆತಂಕ: ಬೆಂಗಳೂರಿನಲ್ಲಿ 200 ರ ಗಡಿ ದಾಟಿದ ಕೋವಿಡ್ ಕೇಸ್!
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಕಿ, ಉಪ್ಪಿನಂಗಡಿ, ಭಾಗಮಂಡಲ, ಕಾರವಾರ, ಆಗುಂಬೆ, ಗೇರುಸೊಪ್ಪ, ಬಂಟವಾಳ, ಮಾಣಿ, ಪುತ್ತೂರು, ಹೊನ್ನಾವರ, ಕುಂದಾಪುರ, ಪಣಂಬೂರು, ಸಿದ್ದಾಪುರ, ನಾಪೋಕ್ಲು, ಕೊಟ್ಟಿಗೆಹಾರ, ಗೋಕರ್ಣ, ಕದ್ರಾ, ಮಂಗಳೂರು, ಕುಮಟಾ, ಸುಳ್ಯ, ಕಾರ್ಕಳ, ಗೋಕರ್ಣದಲ್ಲಿ ಮಳೆಯಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.