ಶಿವಮೊಗ್ಗ: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮುಂಗಾರಿನ ಜೊತೆ ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಆದ ವೈಪರೀತ್ಯದ ತೀವ್ರತೆಯಿಂದ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ!
ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ ಮಾಡಿದ್ದು, ಭಾರೀ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಮಲ್ಪೆ – ಆಗುಂಬೆ ಹೆದ್ದಾರಿ ರಸ್ತೆಯಾಗಿರುವ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ನೀಡಿದ್ದಾರೆ.
ಭಾರೀ ವಾಹನಗಳು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದು, ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ.