ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನದ ಅಲೆ ಹೆಚ್ಚುತ್ತಿರುವುದರ ಮಧ್ಯೆ ಹೈಕಮಾಂಡ್ ಏನು ನಿರ್ಧರಿಸುತ್ತದೆ ಅನ್ನೋದನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ನಗರದಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಏನು ನಿರ್ಧರಿಸುತ್ತದೆ ಅನ್ನೋದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಪಕ್ಷದ ಹೈಕಮಾಂಡ್ ಕೈಯಲ್ಲಿದೆ.
ಅದು ಹೈಕಮಾಂಡ್ಗೆ ಬಿಟ್ಟಿದ್ದು. ಮುಂದಿನ ಕ್ರಮ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್ಗೆ ಇದೆ. ಆದರೆ ಯಾರೂ ಅನಗತ್ಯವಾಗಿ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.