ಬೆಂಗಳೂರು: ಕನ್ನಡ ವಿರೋಧಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾಗೆ ಕರುನಾಡಲ್ಲಿ ಸಂಕಷ್ಟ ಎದುರಾಗಿದೆ. ಕನ್ನಡ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿ ಕೊಟ್ಟು ಕನ್ನಡಿಗರ ಕಣ್ಣು ಕೆಂಪಾಗುವಂತೆ ಮಾಡಿದ್ದ ಕಮಲ್ ಕ್ಷಮೆ ಕೇಳುವವರೆ ಅವರ ಸಿನಿಮಾ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕನ್ನಡಿಗರು ಪಟ್ಟು ಹಿಡಿದ್ದಾರೆ. ತಮ್ಮ ಸಿನಿಮಾ ಬಿಡುಗಡೆಗೆ ಕಾನೂನು ಹೋರಾಟಕ್ಕೆ ಇಳಿದಿದ್ದ ಕಮಲ್ ಗೆ ಮೊದಲ ಹೆಜ್ಜೆಯಲ್ಲಿಯೇ ಹಿನ್ನಡೆಯಾಗಿದೆ. ಥಗ್ ಲೈಫ್ ಸಿನಿಮಾ ರಿಲೀಸ್ಗೆ ಭದ್ರತೆ ಕೋರಿ ಕಮಲ್ ಹಾಸನ್ ಹೈಕೋರ್ಟ್ನ್ಲಲಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆಎ ನಡೆದಿದೆ. ಈ ವೇಳೆ ಕಮಲ್ ಹಾಸನ್ಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ನ್ಯಾ. ಎಂ ನಾಗಪ್ರಸನ್ನ ಪೀಠದಲ್ಲಿ ವಿಚಾರಣೆ ನಡೆದಿದೆ. ಕಮಲ್ ಹಾಸನ್ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ಯಾವುದೇ ಕ್ಷಮೆ ಕೋರಿಲ್ಲ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿಲ್ಲ. ನೀವು ಇತಿಹಾಸಕಾರರ? ಯಾವ ಮನದಂಡ ಇಟ್ಟುಕೊಂಡು ನೀವು ಕೋರ್ಟ್ ಗೆ ಅರ್ಜಿ ಹಾಕಿದ್ದೀರಾ ? ಕರ್ನಾಟಕ ಜನತೆ ಕೇಳಿರುವುದು ಕ್ಷಮೆ. ನಿಮ್ಮ ಸಿನಿಮಾ ಯಾವುದೇ ತೊಂದರೆ ಇಲ್ಲದೆ ನಡೆಯಬೇಕು ಎಂದು ಜಡ್ಜ್ ಹೇಳಿದ್ದಾರೆ.
‘ಸಿ. ರಾಜಗೋಪಾಲಚಾರಿ ಇದೇ ರೀತಿಯ ಹೇಳಿಕೆ ನೀಡಿದ್ದರು. ನಂತರ ಅವರು ಕ್ಷಮಾಯಾಚನೆ ಮಾಡಿದ್ದರು. ಆದರೆ ಕಮಲಹಾಸನ್ ಯಾವುದೇ ಕ್ಷಮಾಯಾಚನೆ ಮಾಡಿಲ್ಲ. ಅವರು ಸಿನಿಮಾ ಮಾಡಿರೋದು ವಾಣಿಜ್ಯ ಉದ್ದೇಶದಿಂದ. ಈಗ ತಪ್ಪು ಮಾಡಿದ್ದಾರೆ. ಅವರು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ’ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಕಮಲ್ ಅವರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.
‘ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂತಾಗಿದೆ. ನೀವು ನಿಮ್ಮ ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ. ಆದರೆ ಕ್ಷಮೆಯಾಚನೆ ಮಾಡಲು ಸಿದ್ಧರಿಲ್ಲ. ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಬಯಸುತ್ತಿದ್ದೀರಾ? 300 ಕೋಟಿ ರೂಪಾಯಿಯ ಸಿನಿಮಾ ಎನ್ನುತ್ತಿದ್ದೀರಾ, ಕ್ಷಮೆಯಾಚನೆ ಮಾಡಿ. ಆಗ ಸಮಸ್ಯೆಯೇ ಇರುವುದಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಕಮಲ್ ಪರ ವಕೀಲರಿಗೆ ಕ್ಷಮೆ ಕೇಳಲು ಸೂಚಿಸಿದ ನ್ಯಾಯಾಧೀಶರು ಇಂದು ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಿದರು.
ಏನಿದು ವಿವಾದ?
ಚೆನ್ನೈನಲ್ಲಿ ಥಗ್ ಲೈಫ್ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂಬ ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು. ಆ ಬಳಿಕ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಸಿನಿಮಾ ಬಿಡುಗಡೆಯಾಗಬಾರದು ಎಂದು ಹೋರಾಟ ನಡೆಸಿದ್ದರು. ಆ ಬಳಿಕ ಕಮಲ್ ಹಾಸನ್, ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು