ಹುಬ್ಬಳ್ಳಿ:- ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸ್ ಇಲಾಖೆ ನಗರದ ಪಾರಿಜಾತ ರೆಸಿಡೆನ್ಸಿ ಮೇಲೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್
ಹಾಗೂ ಗ್ರಾಹಕ ಹಾಗೂ ಹೋಟೆಲ್ ಸಿಬ್ಬಂದಿ ಸೇರಿ ಐದು ಮಂದಿಯನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ತು ಹದಿನೈದು ವರ್ಷಗಳಿಂದ ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಸಂಗ್ರಹಿಸಿ ಸ್ಥಳೀಯ ಪೊಲೀಸರ ಸಹಾಯದಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ತಮಿಳುನಾಡಿನ ಸರ್ಕಾರ ವಿತರಿಸುವ ಕಾಂಡೋಮ್‌ಗಳು ಪತ್ತೆಯಾಗಿದೆ. ಆರೋಪಿಗಳು, ತಪ್ಪಿಸಿಕೊಳ್ಳಲು ಸುರಂಗ ಮಾರ್ಗವನ್ನು ಕೊರೆದಿರುವುದು ಸಹ ಪತ್ತೆಯಾಗಿದೆ.
ಘಟನೆ ಸಂಬಂಧ ಒಡನಾಡಿ ಸಂಸ್ಥೆ ನಿರ್ದೇಶಕ ಪರುಶುರಾಮ ಮಾತನಾಡಿ, ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಲಾಗಿದೆ. ಮೊದಲು ಲಾಡ್ಜ್ ಗಳಿಗೆ ಪರವಾನಗಿ ಕೊಡಬೇಕಾದರೆ ಸರಿಯಾಗಿ ಪರಿಶೀಲನೆ ಮಾಡಿ ಕೊಡಬೇಕು. ಆರೋಗ್ಯ ಇಲಾಖೆ ಮಹಾನಗರ ಪಾಲಿಕೆ ಇದರ ಹೊಣೆ ತೆಗೆದುಕೊಳ್ಳಬೇಕು. ಸರಿಯಾಗಿ ಚಕ್ ಮಾಡಿ ಕೊಡಬೇಕು, ಪಾರಿಜಾತ ಲಾಡ್ಜ್ ಕುರಿ ತುಂಬುವ ದೊಡ್ಡಿ ಆಗಿದೆ. ನಮ್ಮ ಒಡನಾಡಿ ಸಂಸ್ಥೆ ಇದುವರೆಗೆ 14850 ಹೆಣ್ಣು ಮಕ್ಕಳ ರಕ್ಷಣೆ ಮಾಡಲಾಗಿದೆ. ರಕ್ಷಣೆ ಮಾಡಿದ ಹೆಣ್ಣು ಮಕ್ಕಳಿಗೆ ಆರೋಗ್ಯ, ಶಿಕ್ಷಣ ವಸತಿ ಹಾಗೂ ಉದ್ಯೋಗ ಕೊಡಲಾಗಿದೆ ಎಂದರು.
ಘಟನೆ ಸಂಬಂಧ ಒಡನಾಡಿ ಸಂಸ್ಥೆ ಸಂಸ್ಥಾಪಕ ಸ್ಪ್ಯಾನಿ ಮಾತನಾಡಿ, ಹುಬ್ಬಳ್ಳಿಯ ಹೊಸೂರಿನ ಪಾರಿಜಾತ ರೆಸಿಡೆನ್ಸಿ ಮೇಲೆ ತಮ್ಮ ಮಾಹಿತಿ ಆಧಾರದ ಮೇಲೆ ಪೊಲೀಸ್ ದಾಳಿ ಮಾಡಲಾಗಿದೆ. ಪಾರಿಜಾರ ಲಾಡ್ಜ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುವ ಬಗ್ಗೆ ಮಾಹಿತಿ ಇತ್ತು. ಒಡನಾಡಿ ಸಂಸ್ಥೆ ಸಹಯೋಗದಲ್ಲಿ ದಾಳಿ ನಡೆಸಲಾಗಿದೆ. ಇಂತಹ ಲಾಡ್ಜ್ ಮೇಲೆ ಹದ್ದಿನ ಕಣ್ಣು ಇರಸಿಬೇಕು. ಹುಬ್ಬಳ್ಳಿ ಅಷ್ಟೇ ಅಲ್ಲಾ ರಾಜ್ಯದ ವಿವಿಧ ಕಡೆಗಳಲ್ಲಿ ದಾಳಿ ಆಗಬೇಕು. ಹುಬ್ಬಳ್ಳಿಯ ಲಾಡ್ಜ್ ನಲ್ಲಿ ದೊಡ್ಡ ಪ್ರಮಾಣದ ವೇಶ್ಯಾಟಿಕೆ ನಡೆಸುತ್ತಿದ್ದರು. ನೆಲಮಹಡಿ ಮತ್ತು ಮೊದಲನೇ ಮಹಡಿ ಗ್ರಾಹಕರಿಗೆ ಮೀಸಲಿಟ್ಟಿದ್ದು, ಎರಡನೇ ಮಹಡಿಯಲ್ಲಿನ ಕೊಠಡಿಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ತಮಿಳುನಾಡಿನ ಆರೋಗ್ಯ ಇಲಾಖೆಯಿಂದ ವಿತರಿಸುವ ಸಾವಿರಾರು ಕಾಂಡೋಮ್‌ಗಳು ಕೊಠಡಿಯಲ್ಲಿ ಕಂಡುಬಂದಿವೆ. ತಪ್ಪಿಸಿಕೊಳ್ಳಲು ಶೌಚಾಲಯದ ಒಳಗೆ ಸುರಂಗ ಮಾರ್ಗದ ಅಡಗುತಾಣ ಪತ್ತೆಯಾಗಿದೆ. ದಾಳಿ ವೇಳೆ, ಗ್ರಾಹಕರೊಬ್ಬರು ಅದರಲ್ಲಿ ಅಡಗಿಕೊಂಡಿದ್ದರು ಎಂದು ಮಾಹಿತಿ ನೀಡಿದರು.