ಮೈಸೂರು: ನಗರದ ಮಠದ ಬಳಿ ದಾಸನಕೊಪ್ಪಲು ಎಂಬಲ್ಲಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಗುಪ್ತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು, ಇಬ್ಬರು ಯುವತಿಯರೊಂದಿಗೆ 6 ಪುರುಷರನ್ನು ವಶಕ್ಕೆ ಪಡೆದಿದ್ದಾರೆ.
ಈ ಹಣ್ಣಿಗೆ ಹೃದಯಾಘಾತ ತಡೆಯೋ ಶಕ್ತಿ ಇದೆ.. ವಾರದಲ್ಲಿ ಒಮ್ಮೆಯಾದರೂ ತಪ್ಪದೇ ಸೇವಿಸಿ!
ಮಂಜು ಎಂಬಾತ ಈ ದಂಧೆಗೆ ಪ್ರಮುಖ ಸಂಚಾಲಕರಾಗಿದ್ದು, ಮನೆಯ ಸ್ಥಳವನ್ನು ತಿಂಗಳಿಗೊಮ್ಮೆ ಬದಲಾಯಿಸುತ್ತಿದ್ದ ಎನ್ನಲಾಗಿದೆ. ಬಂಧಿತರು ವಿವಿಧ ಭಾಗಗಳಿಂದ ಯುವತಿಯರನ್ನು ಕರೆಸಿಕೊಂಡು, ಹಣಕ್ಕಾಗಿ ಅವರ ಬದುಕನ್ನು ದುರ್ಬಳಕೆ ಮಾಡುತ್ತಿದ್ದ ಘೋರ ದಂಧೆ ನಡೆಸುತ್ತಿದ್ದರು.
ದಾಳಿ ವೇಳೆ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮತ್ತು 6 ಮಂದಿ ಗ್ರಾಹಕರು ಸಿಕ್ಕಿಬಿದ್ದಿದ್ದು, ಇವರ ವಿರುದ್ಧ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಯುವತಿಯರ ಮೇಲೂ ಮಾಹಿತಿ ಕಲೆಹಾಕಿ ತನಿಖೆ ಮುಂದುವರಿಸಲಾಗಿದೆ.