ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಈಗಾಗಲೇ ಶುರುವಾಗಿದೆ. ಕೆಕೆಆರ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2ನೇ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೆಣಸಾಡಲಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೆಂಗಳೂರು ಟೀಮ್ ಕಣಕ್ಕಿಳಿಯಲಿದೆ. ಇದರ ಮಧ್ಯೆ ಮಳೆ ಅಡ್ಡಿಯಾಗಲಿದೆ ಎಂಬ ಆತಂಕವೊಂದು ಕಾಡುತ್ತಿದೆ.
ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!
ಆದ್ರೆ ತಜ್ಞರು ಹೇಳುವ ಪ್ರಕಾರ ಹವಾಮಾನ ಪಂದ್ಯಕ್ಕೆ ಅನುಕೂಲಕರವಾಗಿಯೇ ಇದೆ. ಆದ್ರೆ ಕೇವಲ ಶೇಕಡಾ 5 ರಷ್ಟು ಪಂದ್ಯಕ್ಕೆ ಅಡ್ಡಿಯಾಗುವ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಸದ್ಯ ಚೆನ್ನೈನಲ್ಲಿ 28 ಡಿಗ್ರಿ ಸೆಲ್ಸಿಯಸ್ನಿಂದ 32 ಡಿಗ್ರಿಸೆಲ್ಸ್ನಷ್ಟು ತಾಪಮಾನವಿದೆ. ಈ ಒಂದು ಹವಾಮಾನ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆಯ ತಜ್ಞರು ಹೇಳಿದ್ದಾರೆ.
ಪಿಚ್ ರಿಪೋರ್ಟ್
ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನ ಪಿಚ್ ಸ್ಪಿನ್ನರ್‌ಗಳಿಗೆ ಸ್ವರ್ಗ ಎಂದು ಪರಿಗಣಿಸಲಾಗಿದೆ. ಈ ಮೈದಾನದಲ್ಲಿ ಸ್ಪಿನ್ನರ್‌ಗಳಿಗೆ ಸಾಕಷ್ಟು ನೆರವು ಸಿಗುತ್ತದೆ. ಕಳೆದ ಐಪಿಎಲ್ನಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 170 ರನ್ ಆಗಿತ್ತು. ಪಂದ್ಯ ಸಾಗಿದಂತೆ ಪಿಚ್ನಲ್ಲಿ ಬದಲಾವಣೆ ಕಂಡುಬರುವುದರಿಂದ ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ನಡೆಸಿದರ ಸೂಕ್ತ. ಇಲ್ಲಿ ನಡೆದ ಹೆಚ್ಚಿನ ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡಕ್ಕೆ ಗೆಲುವಿಗಿಂತ ಹೆಚ್ಚಾಗಿ ಸೋಲು ಎದುರಾಗಿದೆ.
ಹವಾಮಾನ ವರದಿ
ಮಾರ್ಚ್ 28 ರಂದು ಚೆನ್ನೈನಲ್ಲಿ ಮಳೆ ಸಾಧ್ಯತೆ ಇಲ್ಲ. ಆದರೆ ತಾಪಮಾನವು 26 ರಿಂದ 27 ಡಿಗ್ರಿಗಳವರೆಗೆ ಇರಲಿದೆ ಎಂದು ಹವಾಮಾನ ತಿಳಿಸಿದೆ. ರಾತ್ರಿಯ ವೇಳೆ ಕೊಂಚ ಇಬ್ಬನಿ ಕಾಟ ಕೂಡ ಇರುವ ಸಾಧ್ಯತೆ ಇದೆ.
ಉಭಯ ತಂಡಗಳು
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಎಂಎಸ್ ಧೋನಿ, ರವೀಂದ್ರ ಜಡೇಜ, ಶಿವಂ ದುಬೆ, ಮಥಿಶಾ ಪತಿರಾನ, ನೂರ್ ಅಹ್ಮದ್, ರವಿಚಂದ್ರನ್ ಅಶ್ವಿನ್, ಡೆವೊನ್ ಕಾನ್ವೇ, ಸೈಯದ್ ಖಲೀಲ್ ಅಹ್ಮದ್, ರಚಿನ್ ರವೀಂದ್ರ, ರಾಹುಲ್ ತ್ರಿಪಾಠಿ, ವಿಜಯ್ ಶಂಕರ್, ಸ್ಯಾಮ್ ಕರನ್, ಶೇಖ್ ರಶೀದ್, ಅಂಶುಲ್ ಕಾಂಬೋಜ್, ಮುಖೇಶ್ ಚೌಧರಿ, ದೀಪಕ್ ಹೂಡಾ, ಗುರ್ಜನ್‌ಪ್ರೀತ್ ಸಿಂಗ್, ನಾಥನ್ ಎಲ್ಲಿಸ್, ಜೇಮೀ ಓವರ್ಟನ್, ಕಮಲೇಶ್ ನಾಗರ್ಕೋಟಿ, ರಾಮಕೃಷ್ಣನ್ ಘೋಷ್, ಶ್ರೇಯಸ್ ಗೋಪಾಲ್, ವಂಶ್ ಬೇಡಿ, ಆಂಡ್ರೆ ಸಿದ್ಧಾರ್ಥ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್ ಸಲಾಂ, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕಲ್, ಸ್ವಸ್ತಿಕ್ ಚಿಖರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.