ಮಂಗಳೂರು: ಬಜ್ಪೆ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ಕೊಟ್ಟಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್ ವೆಲ್ ತಮ್ಮ ಫೇಸ್‌ಬುಕ್ ನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್ ಕರೆ ಕೊಟ್ಟಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನೊಂದೆಡೆ ಸುಹಾಶ್ ಶೆಟ್ಟಿ ಕೊಲೆ ಬಳಿಕ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲು ನಿಷೇಧಾಜ್ಞೆ ಜಾರಿಗೊಳಿಸಿ ಎಸ್ಪಿ ಯತೀಶ್ ಆದೇಶ ಹೊರಿಡಿಸಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಬೆನ್ನಲ್ಲೇ “ಫಿನೀಶ್” ಪೋಸ್ಟ್ ವೈರಲ್
ಇನ್ನೊಂದಡೆ ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.