Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Arun Puthila: ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಗಡಿಪಾರು ನೊಟೀಸ್!

    By Author AINJune 2, 2025
    Share
    Facebook Twitter LinkedIn Pinterest Email
    Demo

    ಮಂಗಳೂರು: ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಅಬ್ದುಲ್ ರಹಿಮಾನ ಕೊಲೆ ನಡೆದಿದೆ ಎಂಬ ಆರೋಪ ಕೋಮು ಸಾಮರಸ್ಯ ಕದಡುವಂತೆ ಮಾಡಿದೆ. ಇದರ ನಡುವೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    ಕರ್ನಾಟಕ ಪೊಲೀಸು ಅಧಿನಿಯಮ, 1963 ಕಲಂ: 58 ರಡಿ ನೋಟೀಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ ಆದೇಶಿಸಲಾಗಿದೆ. ಆದರೆ, ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್​​ನಲ್ಲಿ ಉಲ್ಲೇಖಿಸಿಲ್ಲ.

    ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

    ‘ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ.

     

     

    Demo
    Share. Facebook Twitter LinkedIn Email WhatsApp

    Related Posts

    Onion Price: ಈರುಳ್ಳಿ ದರ ಕುಸಿತ: ಹೆದ್ದಾರಿಯಲ್ಲಿಯೇ ಈರುಳ್ಳಿ ಸುರಿದು ರೈತನ ಪ್ರತಿಭಟನೆ

    June 3, 2025

    ಐಪಿಎಲ್ ಫೈನಲ್ ಪಂದ್ಯ: ಅಭಿಮಾನಿಗಳಿಂದ RCB ಗೆಲುವಿಗಾಗಿ ಕೋಲಾರಮ್ಮಗೆ ವಿಶೇಷ ಪೂಜೆ

    June 3, 2025

    ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ವೃದ್ಧೆ ಹೊತ್ತೊಯ್ದು ಅತ್ಯಾಚಾರ, ಕೊಲೆ..!

    June 3, 2025

    IPL Final: RCB ಟೀಮ್’ಗೆ ಸಪೋರ್ಟ್ ಮಾಡುವಂತೆ ಡಂಗೂರ ಸಾರಿದ ಗ್ರಾಮಸ್ಥರು

    June 3, 2025

    ಹುಬ್ಬಳ್ಳಿ- ತುಳಜಾಪುರ ನಡುವೆ “ರಾಜಹಂಸ” ಬಸ್ ವ್ಯವಸ್ಥೆ

    June 3, 2025

    RCB ಗೆಲುವಿಗಾಗಿ ಹುಬ್ಬಳ್ಳಿ ಅಭಿಮಾನಿಗಳಿಂದ ವಿಶೇಷ ಪೂಜೆ, ಪ್ರಾರ್ಥನೆ

    June 3, 2025

    ಬಾಲಕಿ ಮೇಲೆ ಅತ್ಯಾಚಾರ: ಮಸೀದಿಯೊಂದರ ಮೌಲ್ವಿ ತಂದೆಯಿಂದಲೇ ಕೃತ್ಯ!

    June 3, 2025

    SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!

    June 3, 2025

    ಬಾಲಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

    June 2, 2025

    ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ!

    June 2, 2025

    ಕೋವಿಡ್-19 ತಡೆಗೆ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ

    June 2, 2025

    ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.